ಬೆಳಗಾವಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ: 8–10 ದಿನಕ್ಕೊಮ್ಮೆ ನೀರು ಪೂರೈಕೆ

0
7

ಬೆಳಗಾವಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು, ನಗರದ ಹಲವು ಪ್ರದೇಶಗಳಲ್ಲಿ 8ರಿಂದ 10 ದಿನಗಳ ಅಂತರದಲ್ಲಿ ನೀರು ಪೂರೈಕೆಯಾಗುತ್ತಿದೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದಾಶಿವನಗರ, ಟಿವಿ ಸೆಂಟರ್, ಕಣಬರ್ಗಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಡ್ಕಲ್ ನೀರು ಎತ್ತುವ ಪಂಪ್‌ಹೌಸ್‌ನ ಟ್ರಾನ್ಸ್‌ಫಾರ್ಮರ್ ದೋಷದಿಂದ ನೀರು ಪಂಪಿಂಗ್ ವ್ಯವಸ್ಥೆಗೆ ಅಡಚಣೆ ಉಂಟಾಗಿದ್ದು, ಈಗ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡಲಾಗಿದೆ. ಆದರೆ ನೀರು ಪೂರೈಕೆ ವ್ಯವಸ್ಥೆ ಸಂಪೂರ್ಣ ಸಹಜ ಸ್ಥಿತಿಗೆ ಬರಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀರಿನ ಕೊರತೆಯಿಂದಾಗಿ ಬೋರ್‌ವೆಲ್ ಅಥವಾ ಖಾಸಗಿ ನೀರಿನ ಮೂಲಗಳ ಮೇಲೆ ಅವಲಂಬಿತರಾಗಿರುವ ಕುಟುಂಬಗಳಿಗೂ ತೊಂದರೆ ಹೆಚ್ಚಾಗಿದೆ. ಸಮಸ್ಯೆ ಬಗೆಹರಿಯುವವರೆಗೆ ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ಕ್ರಮ ಕೈಗೊಳ್ಳಲಾಗಿದೆ.

ಈ ನಡುವೆ ಕಡಿಮೆ ಮಳೆ ಹಾಗೂ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಕುರಿತ ಆತಂಕವೂ ಮುಂದುವರಿದಿದೆ. ಅಧಿಕಾರಿಗಳು ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here