HomeUncategorizedNewsನಾಳೆಯಿಂದ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ: ಚೂನಪ್ಪ ಪೂಜೇರಿ

ನಾಳೆಯಿಂದ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ: ಚೂನಪ್ಪ ಪೂಜೇರಿ

ಬೆಳಗಾವಿ: ಸಕ್ಕರೆ ಕಾರ್ಖಾನೆಗಳು ಮೊದಲ ಹಂತದಲ್ಲಿ ಪ್ರತಿ ಟನ್ ಕಬ್ಬಿಗೆ ₹3,600 ದರ ನೀಡಲು ಒಪ್ಪಿಕೊಂಡಿದ್ದು, ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದು ಸಕ್ಕರೆ ಕಾರ್ಖಾನೆಗಳ ಕಾರ್ಯಾರಂಭಕ್ಕೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ತಿಳಿಸಿದರು.

ನಗರದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ನಡೆದ ಮಹತ್ವದ ಸಭೆಯ ಬಳಿಕ ಮಾತನಾಡಿದ ಅವರು, ರೈತರ ಪ್ರತಿಭಟನೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರದಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ.

ಈ ಕುರಿತು ಗುರ್ಲಾಪುರದಲ್ಲಿ ರೈತ ಮುಖಂಡರೊಂದಿಗೆ ಸಮಗ್ರ ಚರ್ಚೆ ನಡೆಸಿ, ನಿರ್ಧಾರದ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಸದ್ಯಕ್ಕೆ ಹೋರಾಟವನ್ನು ಕೈಬಿಡಲು ತೀರ್ಮಾನಿಸಲಾಗಿದೆ ಎಂದು ಚೂನಪ್ಪ ಪೂಜೇರಿ ಸ್ಪಷ್ಟಪಡಿಸಿದರು.

ವರದಿ: ಸಿದ್ದು ಅರಭಾಂವಿ ಕ್ರಾಂತಿ ಕರ್ನಾಟಕ ನ್ಯೂಸ್–ಬೆಳಗಾವಿ

RELATED ARTICLES
- Advertisment -spot_img

Most Popular

Recent Comments