ಬೆಳಗಾವಿಯ ಕನ್ನಡ ಹೋರಾಟಗಾರ ರವಿ ಕೋಟಾರಗಸ್ತಿ ಅವರಿಗೆ ಕೇರಳ-ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗೌರವ

0
13

ಬೆಳಗಾವಿ: ಕನ್ನಡ ಭಾಷೆ, ಸಾಹಿತ್ಯ, ರಂಗಭೂಮಿ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳಗಾವಿಯ ಸಾಹಿತಿ ಮತ್ತು ಕನ್ನಡ ಹೋರಾಟಗಾರ ರವಿ ಕೋಟಾರಗಸ್ತಿ ಅವರಿಗೆ ಪ್ರತಿಷ್ಠಿತ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನವು ರವಿ ಕೋಟಾರಗಸ್ತಿ ಅವರ ಸಾಹಿತ್ಯ ಸೇವೆ, ರಂಗಭೂಮಿ ಸಂಘಟನೆ, ಕನ್ನಡಪರ ಚಟುವಟಿಕೆಗಳು ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಕೇರಳದ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ನಡೆಯಲಿರುವ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಮಕ್ಕಳ ಸಾಹಿತ್ಯ ಉತ್ಸವದ ಸಮಾರೋಪ ಸಮಾರಂಭದಲ್ಲಿ ನವೆಂಬರ್ 29ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ರವಿ ಕೋಟಾರಗಸ್ತಿ ಅವರು ಕಳೆದ ನಾಲ್ಕು ದಶಕಗಳಿಂದ ಬೆಳಗಾವಿ ಭಾಗದಲ್ಲಿ ಸಾಹಿತ್ಯ, ರಂಗಭೂಮಿ ಮತ್ತು ಕನ್ನಡ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡ ಭಾಷೆಯ ಬೆಳವಣಿಗೆಗೆ ಕೊಡುಗೆ ನೀಡುತ್ತಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಬೆಳಗಾವಿ ಜಿಲ್ಲೆಯ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಗಾಗಿ ಶ್ರಮಿಸುತ್ತಿರುವ ಸಾಧಕರಿಗೆ ಇಂತಹ ಗೌರವಗಳು ಮತ್ತಷ್ಟು ಪ್ರೇರಣೆ ನೀಡಲಿವೆ.

LEAVE A REPLY

Please enter your comment!
Please enter your name here