Friday, September 19, 2025
spot_img

ನೆಹರೂರವರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿಎಂ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ  ನೆಹರೂರವರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಹೇಳಿದರು.

ಭಾರತೀಯರ ಕಣ್ಣೀರು ಒರೆಸುವುದು, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಮೊದಲ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿದ ನೆಹರೂರವರು, ನಂತರ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು.

ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಇಂಥ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ ರೀತಿ ಅವಿಸ್ಮರಣೀಯ.

ಅಪಾರ ಶ್ರೀಮಂತ ಕುಟುಂಬಕ್ಕೆ ಸೇರಿದ ನೆಹರೂರವರ ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ಮಾಡಿದರು.

ಆಹಾರ ಕ್ರಾಂತಿ, ಹಸಿರು ಕ್ರಾಂತಿಯ ಜೊತೆಗೆ ವಿಜ್ಞಾನ-ತಂತ್ರಜ್ಞಾನದ ಪ್ರಗತಿಗೆ ಕಾರ್ಯಕ್ರಮಗಳು, ತಾಂತ್ರಿಕ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸಿ ತಾಂತ್ರಿಕ ಕ್ಷೇತ್ರದ ಪ್ರಗತಿಯ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ಕೂಡ ಆದರು.

ಅವರ ಕೊಡುಗೆಯನ್ನು ಬಿಜೆಪಿ, ಆರ್‌ಎಸ್‌ಎಸ್‌ ಎಷ್ಟೇ ಅಳಿಸಲು ಹೆಣಗಾಡಿದರೂ ಅದು ಸಾಧ್ಯವಾಗುತ್ತಿಲ್ಲ.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದರು.

ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದ್ದಾರೆ.

ಅಂಬೇಡ್ಕ‌ರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, ಆರ್‌ಎಸ್‌ಎಸ್ ಅಂಬೇಡ್ಕ‌ರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದೆ.

ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು. ದಲಿತರು, ಶೂದ್ರರ ಮೇಲೆ ಕೇಸುಗಳು ಬೀಳುವಂತೆ ಮಾಡುವುದು ಇದೇ ಸಂಘಪರಿವಾರ ಮತ್ತು ಬಿಜೆಪಿ. ಆಮೇಲೆ ಅವರನ್ನು ಜೈಲಿನಿಂದ ಕರೆದುಕೊಂಡು ಬರುವುದೂ ಇವರೇ. ಇದೇ ನಾಟಕ ಆಡಿಕೊಂಡೇ ಅವರು ಕಾಲಕಳೆಯುತ್ತಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments