ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವುದನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್ ಆರಂಭವಾಗಿದೆ. ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಸಾರ್ವಜನಿಕ ಸಾರಿಗೆ ಬಹುತೇಕ ಯಥಾಸ್ಥಿತಿಯಲ್ಲಿದೆ. ಕಾವೇರಿ ನೀರು ಬಿಡುಗಡೆ ತಡೆಯಬೇಕು ಮತ್ತು ಮೇಕೆದಾಟು ಯೋಜನೆ ಜಾರಿಗೆ ತರಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.


