ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ನ ಮಳೆಗಾಲದ ಅಧಿವೇಶನದ ಮೂರನೇ ದಿನದ ಕಲಾಪ ಇಂದು ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗಲಿದ್ದು, ವಿವಿಧ ರಾಜಕೀಯ ಹಾಗೂ ರಾಜ್ಯದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ–ಜೆಡಿಎಸ್ ವಿಪಕ್ಷಗಳು ಒತ್ತಾಯ ಮಾಡುತ್ತಿವೆ. ಈ ವಿಚಾರವಾಗಿ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಲು ವಿಪಕ್ಷಗಳು ಸಜ್ಜಾಗಿವೆ.
ಇದನ್ನು ಓದಿ:ಸಂಸತ್ ಮುಂಗಾರು ಅಧಿವೇಶನದಲ್ಲಿ ಗದ್ದಲ
ಇದರ ಜೊತೆಗೆ ಪಿಂಚಣಿ ಸ್ಥಗಿತ, ಬಿಡದಿ ಟೌನ್ಶಿಪ್ ಮತ್ತು ಆರ್ಎಸ್ಎಸ್ಗೆ ಸಂಬಂಧಿಸಿದ ಮಸೂದೆಗಳು ಸೇರಿದಂತೆ ಹಲವು ವಿಷಯಗಳು ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ. ಹೀಗಾಗಿ ಮೂರನೇ ದಿನದ ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ಹಾಗೂ ರಾಜಕೀಯ ಚರ್ಚೆ ತೀವ್ರಗೊಳ್ಳುವ ಸಾಧ್ಯತೆಯಿದೆ.


