HomeUncategorizedNewsಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ

ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ

ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ ಸಿಲಿಂಡರ್‌ಗಳ ವಿರುದ್ಧ ರಾಜೇಶ ಬುರ್ಲಿ ತಹಶೀಲ್ದಾರ್ ಚಿಕ್ಕೋಡಿ ಇವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಈ ದಾಳಿ ವೇಳೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿದ್ದುದು ಪತ್ತೆಯಾಗಿದ್ದು, ಒಟ್ಟು ಸುಮಾರು 29 ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಅವರು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಹೋಟೆಲ್ ಹಾಗೂ ಧಾಬಾ ಮಾಲೀಕರು ಅಧಿಕೃತ ವಾಣಿಜ್ಯ ಸಿಲಿಂಡರ್‌ಗಳನ್ನೇ ಬಳಸಬೇಕೆಂದು ಸೂಚಿಸಲಾಗಿದೆ.

ಈ ಕಾರ್ಯಚಾರಣೆಯಲ್ಲಿ ಆಹಾರ ಇಲಾಖೆ ಅಧಿಕಾರಿ ಆಹಾರ ಶಿರಸ್ತೆದಾರರು ಹಣಮಂತ ಕಾಂಡೆಕರ ಮತ್ತು ಆಹಾರ ನಿರೀಕ್ಷಕರು ಐಶ್ವರ್ಯ ದಿವಟೆ ಇದ್ದರು.

RELATED ARTICLES
- Advertisment -spot_img

Most Popular

Recent Comments