ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯ ಮುನ್ನವೇ ಭರ್ಜರಿ ನಿರೀಕ್ಷೆ ಮೂಡಿಸಿದೆ. ಸಿನಿಮಾ ಆಗಸ್ಟ್ 26, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದ್ದು, ಮುಂಗಡ ಟಿಕೆಟ್ ಬುಕ್ಕಿಂಗ್ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರದ ಟೀಸರ್, ಪೋಸ್ಟರ್ಗಳು ಹಾಗೂ ಪ್ರಚಾರದ ವಿಡಿಯೋಗಳು ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿವೆ. ಯಶ್ ಅವರ ವಿಭಿನ್ನ ಲುಕ್ ಮತ್ತು ಆಕ್ಷನ್ ದೃಶ್ಯಗಳು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.
‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್ದಾಸ್ ನಿರ್ದೇಶಿಸಿದ್ದು, ಯಶ್ ಜೊತೆಗೆ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವು ಆಕ್ಷನ್ ಮತ್ತು ಗ್ಯಾಂಗ್ಸ್ಟರ್ ಹಿನ್ನೆಲೆಯ ಕಥೆಯನ್ನು ಒಳಗೊಂಡಿದೆ ಎಂದು ಚಿತ್ರತಂಡ ತಿಳಿಸಿದೆ.
ಇದನ್ನು ಓದಿ:ಯಶ್ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೌಂಟ್ಡೌನ್: ಆ.26ಕ್ಕೆ ವಿಶ್ವದಾದ್ಯಂತ ರಿಲೀಸ್
ಮುಂಗಡ ಬುಕ್ಕಿಂಗ್ನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಬಿಡುಗಡೆಯ ಮೊದಲ ದಿನವೇ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಗುವ ನಿರೀಕ್ಷೆ ಇದೆ. ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ನಗರಗಳು ಹಾಗೂ ವಿದೇಶಗಳಲ್ಲಿಯೂ ಯಶ್ ಅಭಿಮಾನಿಗಳು ಸಿನಿಮಾ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.


