ಕಲ್ಲೋಳಿ: ಮೊಬೈಲ್ ಸ್ಟೇಟಸ್‌ನಲ್ಲಿ ಹಾಕಿದ್ದ ಫೋಟೋ ವಿಚಾರವಾಗಿ ಉಂಟಾದ ವೈಷಮ್ಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲೋಳಿ ಗ್ರಾಮದಲ್ಲಿ ನಡೆದಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಲ್ಲೋಳಿ ಗ್ರಾಮದ ರಮೇಶ್ ಬಂಡೋಳಿ ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಲಕ್ಷ್ಮೀ ಒಡೆಯರ್ ಹಾಗೂ ಬನಪ್ಪ ಒಡೆಯರ್ ಬಂಧಿತ ಆರೋಪಿಗಳು.
ರಮೇಶ್ ಕೆಲ ದಿನಗಳ ಹಿಂದೆ ಆರೋಪಿ ಲಕ್ಷ್ಮೀಯೊಂದಿಗೆ ಇರುವ ಫೋಟೋವನ್ನು ಮೊಬೈಲ್ ಸ್ಟೇಟಸ್‌ಗೆ ಹಾಕಿಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಲಕ್ಷ್ಮೀ ಹಾಗೂ ಬನಪ್ಪ, ಅನೈತಿಕ ಸಂಬಂಧದ ವೈಷಮ್ಯದ ಹಿನ್ನೆಲೆಯಲ್ಲಿ ರಮೇಶ್ ಅವರನ್ನು ತಮ್ಮ ಮನೆಯ ಹಿಂಭಾಗಕ್ಕೆ ಕರೆಸಿಕೊಂಡು ಕೊಲೆ ಮಾಡಿದ್ದಾರೆ.
ಘಟನೆ ಬಳಿಕ ಘಟಪ್ರಭಾ ಪೊಲೀಸದು ಆರೋಪಿಗಳನ್ನು ಬಂಧಿಸಿ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


