HomeUncategorizedNewsಗಣೇಶೋತ್ಸವ ಹಿನ್ನೆಲೆ: ಮರಿಯಮ್ಮನಹಳ್ಳಿ ವ್ಯಾಪ್ತಿಯ ಗಣೇಶ ಪ್ರತಿಷ್ಠಾಪನಾ ಸ್ಥಳಗಳಿಗೆ ಎಸ್ಪಿ ಭೇಟಿ

ಗಣೇಶೋತ್ಸವ ಹಿನ್ನೆಲೆ: ಮರಿಯಮ್ಮನಹಳ್ಳಿ ವ್ಯಾಪ್ತಿಯ ಗಣೇಶ ಪ್ರತಿಷ್ಠಾಪನಾ ಸ್ಥಳಗಳಿಗೆ ಎಸ್ಪಿ ಭೇಟಿ

ವಿಜಯನಗರ: ಮುಂಬರುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗೊಳ್ಳುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಗಣೇಶ ಪ್ರತಿಷ್ಠಾಪನಾ ಸ್ಥಳಗಳಲ್ಲಿ ಭದ್ರತೆ, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿರುವುದಾಗಿ ತಿಳಿಸಲಾಯಿತು.

RELATED ARTICLES
- Advertisment -spot_img

Most Popular

Recent Comments