HomeUncategorizedNewsಗಣೇಶೋತ್ಸವ ಹಿನ್ನೆಲೆ: ಬೆಳಗಾವಿಯಲ್ಲಿ 18 ಕಿ.ಮೀ. ವ್ಯಾಪ್ತಿಯಲ್ಲಿ ಪೊಲೀಸ್ ಬೈಕ್ ಪೆಟ್ರೋಲಿಂಗ್

ಗಣೇಶೋತ್ಸವ ಹಿನ್ನೆಲೆ: ಬೆಳಗಾವಿಯಲ್ಲಿ 18 ಕಿ.ಮೀ. ವ್ಯಾಪ್ತಿಯಲ್ಲಿ ಪೊಲೀಸ್ ಬೈಕ್ ಪೆಟ್ರೋಲಿಂಗ್

ಬೆಳಗಾವಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಹಾಗೂ ಆತ್ಮಸ್ಥೈರ್ಯ ಮೂಡಿಸುವ ಉದ್ದೇಶದಿಂದ ಬೆಳಗಾವಿ ನಗರ ಪೊಲೀಸರು ವಿಶೇಷ ಬೈಕ್ ಪೆಟ್ರೋಲಿಂಗ್ ನಡೆಸಿದರು.

ದಿನಾಂಕ 22-09-2026 ರಂದು ನಗರದ ವಿವಿಧ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು 18 ಕಿ.ಮೀ. ವ್ಯಾಪ್ತಿಯಲ್ಲಿ ಬೈಕ್ ಮೂಲಕ ಪೊಲೀಸ್ ಪೆಟ್ರೋಲಿಂಗ್ ನಡೆಸಲಾಯಿತು.

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಭದ್ರತೆಯ ಭರವಸೆ ಮೂಡಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದರು.

ಗಣೇಶೋತ್ಸವವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಯಿಂದ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ವರದಿ: ಸಿದ್ದು ಅರಭಾವಿ ಕ್ರಾಂತಿ ಕರ್ನಾಟಕ ನ್ಯೂಸ್– ಬೆಳಗಾವಿ

RELATED ARTICLES
- Advertisment -spot_img

Most Popular

Recent Comments