ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಪುಸ್ತಕ ಮೇಳ ಕಾರ್ಯಕ್ರಮ

ಬೆಂಗಳೂರು: ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿದ್ದ ಪುಸ್ತಕ ಮೇಳ ಕಾರ್ಯಕ್ರಮವನ್ನು cm ಸಿದ್ದರಾಮಯ್ಯ ಉದ್ಘಾಟಿಸಿದರು.
ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಎಲ್ಲರೂ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಬೇಕು ಎಂದರು.
ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕು. ಮಕ್ಕಳು ಮೊಬೈಲ್ ಮತ್ತು ಇಂಟರ್ನೆಟ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಸಿಎಂಹೇಳಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿದಂತೆ ಸಚಿವರು, ಶಾಸಕರು, ಅನೇಕ ಗಣ್ಯರು ಉಪಸ್ಥಿತರಿದ್ದರು
