HomeUncategorizedNewsಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಮೆಟ್ರಿಕ್ ಟನ್‌ಗೆ ₹350 ಹೆಚ್ಚುವರಿ ದರ ನೀಡಲು ಸಕ್ಕರೆ...

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಮೆಟ್ರಿಕ್ ಟನ್‌ಗೆ ₹350 ಹೆಚ್ಚುವರಿ ದರ ನೀಡಲು ಸಕ್ಕರೆ ಕಾರ್ಖಾನೆಗಳ ಒಪ್ಪಿಗೆ!

ಬೆಳಗಾವಿ: 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ಕಬ್ಬು ಬೆಳೆಗಾರರಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಮಾನ್ಯ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ರಾಹುಲ್ ಶಿಂದೆ ಅವರ ಸಮ್ಮುಖದಲ್ಲಿ ಕಬ್ಬು ಬೆಳೆಗಾರರ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ನಡುವೆ ಸುದೀರ್ಘ ಚರ್ಚೆ ನಡೆಯಿತು.

ಸಭೆಯ ಚರ್ಚೆಯ ಬಳಿಕ ಪ್ರಸಕ್ತ ಹಂಗಾಮಿನಲ್ಲಿ ಹಿಂದಿನ ಹಂಗಾಮಿಗಿಂತ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ₹350 ಹೆಚ್ಚುವರಿ ದರ ಪಾವತಿಸಲು ಸಕ್ಕರೆ ಕಾರ್ಖಾನೆಗಳು ಒಪ್ಪಿಗೆ ಸೂಚಿಸಿವೆ.

ತೀವ್ರ ನೀರಿನ ಕೊರತೆ ಹಾಗೂ ಬರಗಾಲದ ಪರಿಸ್ಥಿತಿಯಿಂದ ಕಬ್ಬು ಬೆಳೆಗಾರರಿಗೆ ಉಂಟಾಗಬಹುದಾದ ನಷ್ಟವನ್ನು ತಪ್ಪಿಸುವ ನಿಟ್ಟಿನಲ್ಲಿ ಕೂಡಲೇ ಕಬ್ಬು ನುರಿಸುವ ಹಂಗಾಮು ಪ್ರಾರಂಭಿಸಲು ಸಭೆಯಲ್ಲಿ ಪರಸ್ಪರ ಒಪ್ಪಿಗೆ ನೀಡಲಾಗಿದೆ.

ವರದಿ: ಸಿದ್ದು ಅರಭಾಂವಿ ಕ್ರಾಂತಿ ಕರ್ನಾಟಕ ನ್ಯೂಸ್–ಬೆಳಗಾವಿ

RELATED ARTICLES
- Advertisment -spot_img

Most Popular

Recent Comments