HomeUncategorizedNewsಜಿಲ್ಲಾಧಿಕಾರಿ ಮಹಮ್ಮದ್ ರೋಶನ್ ಅವರಿಗೆ ‘ಕರ್ನಾಟಕ ಸಾರ್ವಭೌಮ ಪ್ರಶಸ್ತಿ’ ಪ್ರದಾನ ಸಮಾರಂಭದ ಆಹ್ವಾನ

ಜಿಲ್ಲಾಧಿಕಾರಿ ಮಹಮ್ಮದ್ ರೋಶನ್ ಅವರಿಗೆ ‘ಕರ್ನಾಟಕ ಸಾರ್ವಭೌಮ ಪ್ರಶಸ್ತಿ’ ಪ್ರದಾನ ಸಮಾರಂಭದ ಆಹ್ವಾನ

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಶನ್ ಅವರನ್ನು ಭೇಟಿಯಾಗಿ, ಬೆಳಗಾವಿಯಲ್ಲಿ ನಡೆಯಲಿರುವ ಜಿಲ್ಲೆಯ ಸಾಧಕರಿಗೆ ಗೌರವ ನಮನ ಹಾಗೂ ‘ಕರ್ನಾಟಕ ಸಾರ್ವಭೌಮ ಪ್ರಶಸ್ತಿ’ ಪ್ರದಾನ ಸಮಾರಂಭಕ್ಕೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ರಾಜ್ಯ ಸಂಚಾಲಕ ಸುರೇಶ ಗವನ್ನವರ, ಜಿಲ್ಲಾ ಉಪಾಧ್ಯಕ್ಷ ಗಣೇಶ ರೋಕಡೆ, ಸತೀಶ ಗುಡದವರ, ಬಾಳು ಜಡಗಿ, ಅಡಿವೆಪ್ಪಾ ತಲ್ಲೂರಿ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬೆಳಗಾವಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಸಮಾರಂಭವನ್ನು ಆಯೋಜಿಸಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

ವರದಿ: ಸಿದ್ದು ಅರಭಾವಿ ಕ್ರಾಂತಿ ಕರ್ನಾಟಕ ನ್ಯೂಸ್–ಬೆಳಗಾವಿ 

RELATED ARTICLES
- Advertisment -spot_img

Most Popular

Recent Comments