HomeUncategorizedNewsಕಂಕಣವಾಡಿ: ಅಕ್ಟೋಬರ್ 2 ರಿಂದ ಶ್ರೀ ಗಂಗಾಭಾವಿ ಕರೆಮ್ಮ ದೇವಿ ಜಾತ್ರಾ ಮಹೋತ್ಸವ

ಕಂಕಣವಾಡಿ: ಅಕ್ಟೋಬರ್ 2 ರಿಂದ ಶ್ರೀ ಗಂಗಾಭಾವಿ ಕರೆಮ್ಮ ದೇವಿ ಜಾತ್ರಾ ಮಹೋತ್ಸವ

ಕಂಕಣವಾಡಿ:  ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಪಟ್ಟಣದ ಪ್ರಸಿದ್ಧ ಶ್ರೀ ಗಂಗಾಭಾವಿ ಕರೆಮ್ಮ ದೇವಿ ಜಾತ್ರಾ ಮಹೋತ್ಸವವು ದಿನಾಂಕ 02-10-2026 ರಿಂದ 06-10-2026 ರವರೆಗೆ ವಿಜೃಂಭಣೆಯಿಂದ ಜರುಗಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜಾ ಸೌಕರ್ಯಗಳು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಅಧ್ಯಕ್ಷರು ಮನವಿ ಮಾಡಿದ್ದಾರೆ.

ಆರು ದಿನಗಳ ಕಾಲ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಪ್ರಮುಖ ನಾಯಕರಾದ ಪ್ರತಾಪರಾವ್ (ಅಣ್ಣಾ) ಪಾಟೀಲ್, ವಿವೇಕರಾವ್ (ಅಣ್ಣಾ) ಪಾಟೀಲ್, ಪ್ರಣಯ ಪಾಟೀಲ್ (ಅಣ್ಣಾ) ಹಾಗೂ ಶಿವರಾಜ (ಅಣ್ಣಾ) ಪಾಟೀಲ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಹುಕ್ಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ವಿಠ್ಠಲ್ ಭಜಂತ್ರಿ ಕ್ರಾಂತಿ ಕರ್ನಾಟಕ ನ್ಯೂಸ್ ಬೆಳಗಾವಿ

RELATED ARTICLES
- Advertisment -spot_img

Most Popular

Recent Comments