ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಳಹರಿವು ಮುಂದುವರಿದಿದ್ದು, ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳು ಭರ್ತಿಯ ಹಂತದತ್ತ ಸಾಗುತ್ತಿವೆ. ಉತ್ತಮ ಮಳೆಯ ಹಿನ್ನೆಲೆಯಲ್ಲಿ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಇದೇ ವೇಳೆ ಕಬಿನಿ ಜಲಾಶಯದಿಂದ ನದಿಗೆ ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


