ಬ್ಯಾಟ್ ಬೀಸುವ ಮೂಲಕ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ

ಗೋಕಾಕ್: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟ್ ಬೀಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘವು ಶುಕ್ರವಾರ ಆಯೋಜಿಸಿದ ಹೊನಲು-ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೊದಲ ಉದ್ಘಾಟನಾ ಪಂದ್ಯಾವಳಿಯಲ್ಲಿ ಟಾಸ್ಕ್ ಮಾಡಿದರು.
ನಂತರ ನೌಕರರ ಸಂಘದ ಕೋರಿಕೆಯ ಮೇರೆಗೆ ಕ್ರಿಕೆಟ್ ಆಡಿದರು ಮೊದಲಿನಿಂದಲೂ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸಾಂಕೇತಿಕವಾದ ಒಂದು ಬಾಲ್ಗೆ ಬ್ಯಾಟ್ ಬೀಸಿದಾಗ ಕ್ರೀಡಾಭಿಮಾನಿಗಳು ಚಪ್ಪಾಳೆ ತಟ್ಟಿದರು.
ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಬಾಲಚಂದ್ರ ಜಾರಕಿಹೊಳಿ ಅವರನ್ನು ಗೋಕಾಕ್ ತಹಶೀಲ್ದಾರ್ ಮೋಹನ್ ಭಸ್ಮೆ ಅವರು ಪಂದ್ಯಾವಳಿಗೆ ಬರುವಂತೆ ಭೇಟಿಯಾಗಿ ಮನವಿ ಮಾಡಿಕೊಂಡರು.
