ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ಆಸ್ಪತ್ರೆಯ ಟಿಎಚ್‌ಒ ಹಾಗೂ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಕರ್ತವ್ಯ ನಿರ್ವಹಣೆ ಮತ್ತು ಸಾರ್ವಜನಿಕರಿಗೆ ಸೂಕ್ತ ವೈದ್ಯಕೀಯ ಸೇವೆ ಒದಗಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪರಿಶೀಲನೆ ವೇಳೆ ವಿವಿಧ ವಿಚಾರಗಳ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದ ಉಪ ಲೋಕಾಯುಕ್ತರು, ಆಸ್ಪತ್ರೆಯ ಕಾರ್ಯವೈಖರಿ ಮತ್ತು ಸೇವೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ನಡೆದ ಮಾತುಕತೆಯಲ್ಲಿ “ತಾವು ಡ್ರಿಂಕ್ಸ್ ಮಾಡ್ತೀರಾ?” ಹಾಗೂ “ಅಮಿತ್ ಶಾ… ಅವರ ಅಪ್ಪ ಸಂಬಂಧ ಇಲ್ಲ” ಎಂಬ ಮಾತುಗಳು ಕೇಳಿಬಂದಿರುವುದು ವರದಿಯಾಗಿದೆ.


