Homeದೇಶಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಆಗಸ್ಟ್ 15, 2026ರಂದು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯಲಿದೆ. ಈ ಬಾರಿ ಸಮಾರಂಭದಲ್ಲಿ ಇದೇ ಮೊದಲ ಬಾರಿಗೆ ‘ವಂದೇ ಮಾತರಂ’ ಗಾಯನಕ್ಕೆ ವಿಶೇಷ ಸ್ಥಾನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಗೆ ಆಗಮಿಸಿದ ಬಳಿಕ ‘ವಂದೇ ಮಾತರಂ’ ಗಾಯನ ನಡೆಯಲಿದೆ. ನಂತರ ಧ್ವಜಾರೋಹಣ ಹಾಗೂ ‘ಜನ ಗಣ ಮನ’ ರಾಷ್ಟ್ರಗೀತೆ ಪ್ರಸ್ತುತವಾಗಲಿದೆ.

ಧ್ವಜಾರೋಹಣ ಸಮಯ: ಬೆಳಿಗ್ಗೆ 7:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಸ್ವಾತಂತ್ರ್ಯ ದಿನದ ಭಾಷಣ ಮಾಡಲಿದ್ದಾರೆ.

ಈ ವರ್ಷದ ಕಾರ್ಯಕ್ರಮದಲ್ಲಿ ‘ಯುವಶಕ್ತಿ – ವಿಕಸಿತ ಭಾರತ@2047’ ಹಾಗೂ ‘ವಂದೇ ಮಾತರಂ’ನ 150 ವರ್ಷಗಳ ಐತಿಹಾಸಿಕ ಹಿನ್ನೆಲೆಗೆ ವಿಶೇಷ ಒತ್ತು ನೀಡಲಾಗಿದೆ

RELATED ARTICLES
- Advertisment -spot_img

Most Popular

Recent Comments